ಯಶಸ್ವಿನಿ ಯೋಜನೆ ಬಗ್ಗೆ

ಸಹಕಾರ ಸಂಘಗಳ ಸದಸ್ಯರಿಗಾಗಿ ಕರ್ನಾಟಕ ರಾಜ್ಯ ಸರ್ಕಾರವು ರೂಪಿಸಿರುವ ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಗೆ ಸುಸ್ವಾಗತ. ರಾಜ್ಯದ ಎಲ್ಲಾ ಸಹಕಾರಿಗಳ ಮತ್ತು ರೈತರ ನಿರಂತರ ಒತ್ತಾಯ ಹಾಗೂ ಬೇಡಿಕೆ ಪರಿಗಣಿಸಿ ಹಿಂದೆ 2018ರಲ್ಲಿ ಸ್ಥಗಿತಗೊಳಿಸಿದ್ದ ಯಶಸ್ವಿನಿ ಯೋಜನೆಯನ್ನು ಪುನರ್ ಜಾರಿಗೊಳಿಸಲು ರಾಜ್ಯ ಸರ್ಕಾರವು ತೀರ್ಮಾನಿಸಿ, 2022-23ನೇ ಸಾಲಿನ ಆಯವ್ಯಯದಲ್ಲಿ ಪರಿಷ್ಕೃತ ಯಶಸ್ವಿನಿ ಯೋಜನೆಯನ್ನು ಘೋಷಣೆ ಮಾಡಿದೆ.

ಯೋಜನೆ ಜಾರಿಗಾಗಿಯಶಸ್ವಿನಿ ಸಹಕಾರಿ ಸದಸ್ಯರ ಆರೋಗ್ಯ ರಕ್ಷಣಾ ಟ್ರಸ್ಟ್ಅನ್ನು ರಚಿಸಿದ್ದು, ಇದಕ್ಕೆ ಮಾನ್ಯ ಮುಖ್ಯಮಂತ್ರಿಗಳು ಮಹಾ ಪೋಷಕರಾಗಿ, ಸಹಕಾರ ಸಚಿವರು ಪೋಷಕರಾಗಿ, ಸರ್ಕಾರದ ಪ್ರಧಾನ ಕಾರ್ಯದರ್ಶಿ ಸಹಕಾರ ಇಲಾಖೆ ಇವರು ಟ್ರಸ್ಟ್ ಅಧ್ಯಕ್ಷರಾಗಿರುತ್ತಾರೆ. ಸಹಕಾರ ಸಂಘಗಳ ನಿಬಂಧಕರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರು, ಸಹಕಾರ ಇಲಾಖೆಯ ಹಿರಿಯ ಅಧಿಕಾರಿಗಳು, ವಿವಿಧ ವೈದ್ಯಕೀಯ ಕ್ಷೇತ್ರದ ನುರಿತ ವೈದ್ಯಕೀಯ ತಜ್ಞರು ಹಾಗೂ ಇಬ್ಬರು ಹಿರಿಯ ಸಹಕಾರಿಗಳು ದಕ್ಷಿಣ ಕರ್ನಾಟಕ ಮತ್ತು ಉತ್ತರ ಕರ್ನಾಟಕ ಭಾಗದಿಂದ ತಲಾ ಒಬ್ಬರು ಟ್ರಸ್ಟ್ ಸದಸ್ಯರಾಗಿರುತ್ತಾರೆ.

ಮತ್ತಷ್ಟು ಓದು

Twitter Box